-->
ಸೋನಂ ವಾಂಗ್‌ಚುಕ್ ಬಂಧನ ಖಂಡಿಸಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಪ್ರತಿಭಟನೆ

ಸೋನಂ ವಾಂಗ್‌ಚುಕ್ ಬಂಧನ ಖಂಡಿಸಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಪ್ರತಿಭಟನೆ


ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಬಂಧನವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ವಲಯ ಸಮಿತಿ ಹಾಗೂ ಉಡುಪಿ ವಲಯ ಕಟ್ಟಡ ಕಾರ್ಮಿಕರ ಮಕ್ಕಳ ನೇತೃತ್ವದಲ್ಲಿ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಸೋನಂ ವಾಂಗ್‌ಚುಕ್ ಅವರ ಬಂಧನವನ್ನು ಪ್ರಜಾಪ್ರಭುತ್ವದ ಹಕ್ಕುಗಳ ಮೇಲಿನ ದಾಳಿಯೆಂದು ಆರೋಪಿಸಿ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಇದೇ ವೇಳೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಉಲ್ಲೇಖಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.


ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರನ್ನು ಬಂಧಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ನಡೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Ads on article

Advertise in articles 1

advertising articles 2

Advertise under the article