-->
ಕೋಟೇಶ್ವರ ಅಪಘಾತ: ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ

ಕೋಟೇಶ್ವರ ಅಪಘಾತ: ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ


ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದ ಕಿನಾರಾ ಜಂಕ್ಷನ್ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಲಾರಿ ಚಾಲಕ ಬಾಲ ಮುರುಗನ್ ಎಂದು ಗುರುತಿಸಲಾಗಿದೆ. 

ಜುಲೈ 9ರಂದು ಕೋಟೇಶ್ವರದ ಕಿನಾರಾ ಜಂಕ್ಷನ್ ಬಳಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಬೈಕ್ ಸವಾರ ಭರತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಲಾರಿ ಚಾಲಕನ ಅಜಾಗರೂಕ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article