ಮಣಿಪಾಲದ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
Sunday, July 05, 2026
ಮಣಿಪಾಲದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಇಂದು ಸಂಜೆ ಬೆಳಕಿಗೆ ಬಂದಿದೆ.
ಮಣಿಪಾಲದ ನ್ಯಾಚುರಲ್ ಐಸ್ ಕ್ರೀಮ್ ಬಳಿ ಇರುವ ಕರ್ನಲ್ ತಮ್ಮಯ್ಯ ಉಡುಪ ಎಂಬವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ.
ಕರ್ನಲ್ ತಮ್ಮಯ್ಯ ಅವರ ಕುಟುಂಬವು ಜೂ. 25ರಂದು ಹಿಮಾಚಲ ಪ್ರದೇಶಕ್ಕೆ ತೆರಳಿದ್ದು, ವಾಪಾಸ್ ಮನೆಗೆ ಹಿಂತಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಮಣಿಪಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
