-->
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಶೂಟ್‌ಔಟ್: ವ್ಯಕ್ತಿ ಸಾವು

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಶೂಟ್‌ಔಟ್: ವ್ಯಕ್ತಿ ಸಾವು


ಉಡುಪಿ ಜಿಲ್ಲೆಯ ಕುಂದಾಪುರ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಶೂಟ್‌ಔಟ್ ನಡೆದಿದ್ದು,ಪ್ರಕರಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.


ಮೃತರನ್ನು ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಮಾರು 4:00 ಗಂಟೆ ವೇಳೆಗೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಗುಂಡಿನ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮಾಹಿತಿ ಪಡೆದ ಕುಂದಾಪುರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ಆರಂಭಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article