-->
ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಯ ಬಂಧನ

ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಯ ಬಂಧನ


ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್‌ ಬಂಧಿತ ಆರೋಪಿ.ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ. ಬಂಧಿತ ಇಮ್ರಾನ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ, ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.


 

Ads on article

Advertise in articles 1

advertising articles 2

Advertise under the article