ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವನ್ನು ಬಿಜೆಪಿ ಒಪ್ಪುವುದಿಲ್ಲ: ಶಾಸಕ ಸುನಿಲ್ ಕುಮಾರ್
ಕಾಂಗ್ರೆಸ್ ಗೆ ಪ್ರಜಾಪ್ರಭುತ್ವ, ಸಂವಿಧಾನ, ಕಾನೂನಿನ ಮೇಲೆ ನಂಬಿಕೆ ಇಲ್ಲ. ಚಳುವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವುದನ್ನು ಬಿಜೆಪಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕೆಪಿಎಸ್ಸಿಯಲ್ಲಿ ಪ್ರತಿದಿನ ಒಂದಲ್ಲೊಂದು ಹಗರಣ ಬೆಳಕಿಗೆ ಬರುತ್ತಿದ್ದು, ಇದರಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಲ್ಲಿ ಆತಂಕ ಹೆಚ್ಚಾಗಿದೆ ಎಂದು ಹೇಳಿದರು. ವಿಧಾನಸಭೆಯಲ್ಲಿಯೇ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ಹೇಳಿದ ಅವರು, ಕೆಪಿಎಸ್ಸಿ ಅಧ್ಯಕ್ಷರ ಪಾತ್ರದ ಬಗ್ಗೆಯೂ ಗಂಭೀರ ಆರೋಪಗಳನ್ನು ಮಾಡಿದರು. ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಹಣದ ವ್ಯವಹಾರ ನಡೆದಿರುವುದು ಧ್ವನಿಮುದ್ರಿಕೆಯ ಮೂಲಕ ಬಹಿರಂಗವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ತಕ್ಷಣ ತನಿಖೆ ನಡೆಸಿ ಯುವಕರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಸಿ.ಟಿ. ರವಿಗೆ ನೋಟಿಸ್ ನೀಡಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ರಾಜ್ಯ ಸರ್ಕಾರದ ಆದ್ಯತೆಗಳು ಬದಲಾಗಿದ್ದು, ಗೃಹ ಇಲಾಖೆ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನೇ ಪರಿಶೀಲಿಸುವ ಕೆಲಸದಲ್ಲಿ ತೊಡಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳದೇ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳನ್ನು ಮಾತ್ರ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ದರೋಡೆ, ಕೊಲೆ ಹಾಗೂ ಪೊಲೀಸರ ಮೇಲಿನ ಹಲ್ಲೆಗಳಂತಹ ಗಂಭೀರ ಪ್ರಕರಣಗಳತ್ತ ಸರ್ಕಾರ ಗಮನ ಹರಿಸುತ್ತಿಲ್ಲ ಎಂದರು.
ಲೋಕಸಭೆ ಅಧಿವೇಶನದ ಕುರಿತು ಮಾತನಾಡಿದ ಅವರು, ಚರ್ಚೆಯಿಂದಲೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಾಗುತ್ತದೆ. ಸಂಸತ್ತಿನ ಚರ್ಚೆಗಳನ್ನು ಬಹಿಷ್ಕರಿಸಿ ಕೇವಲ ಚಳುವಳಿಯ ಮಾರ್ಗ ಹಿಡಿಯುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ವವಿದೆ. ಆದರೆ ಚಳುವಳಿ ಹೆಸರಿನಲ್ಲಿ ಅರಾಜಕತೆ, ಪೊಲೀಸರ ಮೇಲಿನ ಹಲ್ಲೆ ಅಥವಾ ಕಲ್ಲುತೂರಾಗ್ದಾಳಿ ನಡೆಸಿದರು.
ಇ–20 ಪೆಟ್ರೋಲ್ ವಿರುದ್ಧದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ನಿಜವಾದ ಬೇಡಿಕೆಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ. ಆದರೆ ಚಳುವಳಿ ಹೆಸರಿನಲ್ಲಿ ಅರಾಜಕತೆ, ಪೊಲೀಸರ ಮೇಲಿನ ಹಲ್ಲೆ ಅಥವಾ ಕಲ್ಲುತೂರಾಟವನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದರು.
ಪಡಿತರ ಅಕ್ಕಿ ಕಾಳಸಂತೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪಗಳ ಸಂಪೂರ್ಣ ಮಾಹಿತಿ ಹೊರಬರಲಿ, ತಪ್ಪಿತಸ್ಥರು ಯಾರು ಎಂಬುದು ಸ್ಪಷ್ಟವಾದ ಬಳಿಕ ಕ್ರಮವಾಗಲಿ ಎಂದು ಹೇಳಿದರು.
ಇದೇ ವೇಳೆ ಬರ ಅಧ್ಯಯನ ಪ್ರವಾಸ ಆರಂಭಿಸಿರುವುದಾಗಿ ತಿಳಿಸಿದ ಸುನಿಲ್ ಕುಮಾರ್, ಹಾಸನ, ಚಿಕ್ಕಮಗಳೂರು ಹಾಗೂ ಶೃಂಗೇರಿ ಭಾಗಗಳಿಗೆ ಭೇಟಿ ನೀಡುವುದಾಗಿ ಹೇಳಿದರು. 2023ರ ನಂತರ ಉಡುಪಿ ಹಾಗೂ ಮಂಗಳೂರು ಭಾಗಗಳಿಗೆ ಸಮರ್ಪಕ ಅನುದಾನ ಸಿಕ್ಕಿಲ್ಲ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಕೇಂದ್ರ ಸರ್ಕಾರದ ಮೇಲೆ ಹಾಕಬಾರದು ಎಂದು ಹೇಳಿದರು. ಕೇಂದ್ರ ಸರ್ಕಾರ ಮಾನದಂಡಗಳ ಪ್ರಕಾರ ಅಧ್ಯಯನ ತಂಡ ಕಳುಹಿಸಿ ಬರಪೀಡಿತ ರಾಜ್ಯಗಳಿಗೆ ಅನುದಾನ ನೀಡುತ್ತದೆ ಎಂದು ಅವರು ತಿಳಿಸಿದರು.