-->
ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶದಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ ಮತ್ತು ಕೇಂದ್ರ ಸರ್ಕಾರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮುನ್ನ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳು, ನೀಟ್ ಪರೀಕ್ಷೆ ನಡೆಸುವಲ್ಲಿ ಉಂಟಾದ ಅಕ್ರಮಗಳ ಹೊಣೆ ಹೊತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದರು.


Ads on article

Advertise in articles 1

advertising articles 2

Advertise under the article