-->
ರಜೆ ಆದೇಶ ಉಲ್ಲಂಘಿಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ– ಡಿಸಿ ದರ್ಶನ್ ಎಚ್ಚರಿಕೆ

ರಜೆ ಆದೇಶ ಉಲ್ಲಂಘಿಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ– ಡಿಸಿ ದರ್ಶನ್ ಎಚ್ಚರಿಕೆ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಘೋಷಿಸಿರುವ ಶಾಲೆ-ಕಾಲೇಜುಗಳ ರಜೆ ಆದೇಶವನ್ನು ಉಲ್ಲಂಘಿಸಿ ತರಗತಿ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಇತರ ಶೈಕ್ಷಣಿಕ ಸಂಸ್ಥೆಗಳು ಜಿಲ್ಲಾಡಳಿತದ ರಜೆ ಆದೇಶವನ್ನು ಲೆಕ್ಕಿಸದೆ ತರಗತಿಗಳನ್ನು ನಡೆಸಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆ ತರಗತಿಗಳನ್ನು ನಡೆಸಿರುವುದು ಕಂಡುಬಂದರೆ, ಸಂಬಂಧಿತ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಭಾರೀ ಮಳೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಣೆ ಮಾಡಲಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಜಿಲ್ಲಾಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ರಜೆ ಆದೇಶ ಉಲ್ಲಂಘಿಸುವ ಯಾವುದೇ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

Ads on article

Advertise in articles 1

advertising articles 2

Advertise under the article