-->
 ಮಜೂರು: ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಮಜೂರು: ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ


ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮವಾಗಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜೂರು ಗ್ರಾಮದ ನಿವಾಸಿ ಪುಷ್ಪ ಅವರ ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ.


ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿ, ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ಸರ್ಕಾರದಿಂದ ದೊರೆಯುವ ಪರಿಹಾರ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಬೂತ್ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article