-->
 ಯುವತಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಕೊಲೆಗಡುಕ ಅರೆಸ್ಟ್

ಯುವತಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಕೊಲೆಗಡುಕ ಅರೆಸ್ಟ್


ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಕ್ಯಪದವು ನಿವಾಸಿ ಲಾವಣ್ಯಳನ್ನು ಹತ್ಯೆಗೈದ ಚೇತನ್ ನನ್ನು ಮಂಗಳೂರಿನ ಪಚ್ಚನಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯರನ್ನು ನಿನ್ನೆ ಸಂಜೆ ಬಂಟ್ವಾಳ  ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬರ್ಬರವಾಗಿ ಕೊಲೆಗೈದು ಆರೋಪಿ ಚೇತನ್ ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ಮಂಗಳೂರಿನ ಪಚ್ಚನಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ


Ads on article

Advertise in articles 1

advertising articles 2

Advertise under the article