ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ದೆಹಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.