ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕಾರ್ಯದರ್ಶಿ ಅಶೋಕ್ ಸುವರ್ಣ ನಿಧನ
Wednesday, July 29, 2026
ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕಾರ್ಯದರ್ಶಿ, ಕಳೆದ 30 ವರ್ಷಗಳಿಂದ ಕಾರು ಮೆಕಾನಿಕ್ ಗ್ಯಾರೇಜ್ ನಡೆಸುತ್ತಾ ಜನರ ವಿಶ್ವಾಸ ಗಳಿಸಿದ್ದ ಅಶೋಕ್ ಸುವರ್ಣ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು.
ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಕಾರ್ಯದ ವೇಳೆ ಅಪಾರ ಪರಿಶ್ರಮ ವಹಿಸಿ, ಸಂಘಟನಾ ಚಾತುರ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಸಣ್ಣ ಮಕ್ಕಳನ್ನು, ಸಹೋದರ, ಸಹೋದರಿ ಹಾಗೂ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಮಾಜದ ವಿವಿಧ ಗಣ್ಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.