-->
 ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೋಟ ಠಾಣೆಗೆ ದೂರು

ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೋಟ ಠಾಣೆಗೆ ದೂರು


ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ ನಟ ಪ್ರಕಾಶ್‌ರಾಜ್ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅಕ್ಷೇಪಾರ್ಹ ಹೇಳಿಕೆ ನೀಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಅವರು ಕೋಟ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನಟ ಪ್ರಕಾಶ್‌ರಾಜ್ ಅವರಿಗೆ ಅಗತ್ಯವಿದ್ದಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಪ್ರಕರಣದ ತನಿಖೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಲಾಗಿದೆ.

ದೂರು ಅರ್ಜಿಯನ್ನು ಸ್ವೀಕರಿಸಿರುವ ಕೋಟ ಪೊಲೀಸ್ ಠಾಣಾಧಿಕಾರಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿರುವುದರಿಂದ, ಸಲ್ಲಿಸಲಾದ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article