ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವ್ಯಕ್ತಿಯ ವಿಚಾರಣೆ
Monday, July 06, 2026
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಭಾವಚಿತ್ರ ಹಾಗೂ ಪರಶುರಾಮ ಮೂರ್ತಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಉಡುಪಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಉದ್ಯಾವರ ನಿವಾಸಿ ಗುರುಪ್ರಸಾದ್ ಅವರನ್ನು ಇಂದು ಉಡುಪಿಯ ಎಂಜಿಎಂ ಸಮೀಪ ವಶಕ್ಕೆ ಪಡೆದ ಪೊಲೀಸರು, ಬಳಿಕ ನೋಟೀಸ್ ನೀಡಿ ಬಿಡುಗಡೆಗೊಳಿಸಿದ್ದಾರೆ.
ಶಾಸಕ ಸುನಿಲ್ ಕುಮಾರ್ ಅವರ ಭಾವಚಿತ್ರವನ್ನು ಪರಶುರಾಮ ಮೂರ್ತಿಯ ಚಿತ್ರದೊಂದಿಗೆ ಮರ್ಜ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸುಮಂತ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರ ಅನ್ವಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಪ್ರಕರಣದ ಸಂಬಂಧ ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆ ಮುಂದುವರಿದಿದೆ.