ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾಮುಕ ಕಂಡಕ್ಟರ್ ಅರೆಸ್ಟ್
Saturday, July 11, 2026
ಮಂಗಳೂರಿನಿಂದ ವಿಟ್ಲ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಕಂಡಕ್ಟರ್ ಒಬ್ಬನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದನು.
ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಕಾಲೇಜು ಮುಗಿಸಿ ವಿದ್ಯಾರ್ಥಿನಿಯರು ಬಸ್‌ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಆರೋಪಿಯು ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿಕೊಂಡು ಆಕೆಯ ಸೀಟಿನ ಮುಂಭಾಗ ನಿಂತು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಅಶ್ಲೀಲ ಲೈಂಗಿಕ ಸನ್ನೆಗಳನ್ನು ಮಾಡಿ ಬಸ್‌ನ ಹಿಂಭಾಗಕ್ಕೆ ಬರುವಂತೆ ಕೈಸನ್ನೆ ಮೂಲಕ ಸೂಚನೆ ನೀಡಿ ಆಕೆಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಘಟನೆಯ ಕುರಿತು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.