-->
 ಲಯನ್ಸ್ ಕ್ಲಬ್ ಮಣಿಪಾಲ್ ಯುಕ್ತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಲಯನ್ಸ್ ಕ್ಲಬ್ ಮಣಿಪಾಲ್ ಯುಕ್ತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ


ಲಯನ್ಸ್ ಕ್ಲಬ್ ಮಣಿಪಾಲ್ ಯುಕ್ತಿ ಇದರ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉದ್ಯಾವರದ ನಿತ್ಯಾನಂದ ಸಭಾಭವನದಲ್ಲಿ ನಡೆಯಿತು.

ಜಿಲ್ಲಾ LCIF ಮುಖ್ಯ ಸಂಯೋಜಕರಾದ ಹೃಷಿಕೇಶ್ ಹೆಗ್ಡೆ ಅವರು ಅನುಸ್ಥಾಪನಾ ಅಧಿಕಾರಿಯಾಗಿ ನೂತನ ಅಧ್ಯಕ್ಷೆ ಶ್ವೇತಾ ವರುಣ್ ಶೆಟ್ಟಿ, ಕಾರ್ಯದರ್ಶಿ ವಿದ್ಯಾಧರಿ, ಖಜಾಂಚಿ ಶೈಲಜಾ ಎಸ್. ರಾವ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿ ಅಧಿಕಾರ ವಹಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂತಾಧ್ಯಕ್ಷ ದಿವಾಕರ್ ಸನಿಲ್ ಹಾಗೂ ವಲಯಾಧ್ಯಕ್ಷೆ ಪೂರ್ಣಿಮಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಲಬ್‌ನ ಸದಸ್ಯರು, ಹಾಗೂ ಆಹ್ವಾನಿತ ಅತಿಥಿಗಳು ಉಪಸ್ಥಿತರಿದ್ದು ನೂತನ ತಂಡಕ್ಕೆ ಶುಭಾಶಯ ಕೋರಿದರು. 

Ads on article

Advertise in articles 1

advertising articles 2

Advertise under the article