ಬಂಟ್ವಾಳ: ಕಾರು-ಬೈಕ್ ಅಪಘಾತ: ಸವಾರ ಸಾವು
Monday, July 06, 2026
ಕಾರು- ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ ನಡೆದಿದೆ,
ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.
ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಹಾಗೂ ಕಾರು ಎರಡೂ ಜಖಂಗೊಂಡಿವೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅಶೋಕ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.