-->
 ಶಾಸಕ ಯಶಪಾಲ್ ಸುವರ್ಣ ವಿರುದ್ಧ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಶಾಸಕ ಯಶಪಾಲ್ ಸುವರ್ಣ ವಿರುದ್ಧ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ


ಬಿಜೆಪಿ ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನ ಮಾಡಿದ ಶಾಸಕರಾದ ಯಶಪಾಲ್ ಸುವರ್ಣ ವಿರುದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. 

ಉಡುಪಿಯ ಜೋಡುಕಟ್ಟೆ ಸಮೀಪ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಗೂಂಡಾ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿದರು. ಶಾಸಕ ಯಶಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಪ್ರತಿಭಟನೆ ಹಿನ್ನಲೆಯಲ್ಲಿ ನಗರದಾದ್ಯಂತ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. 

 




 

 

Ads on article

Advertise in articles 1

advertising articles 2

Advertise under the article