-->
 ಕುಕ್ಕೆಹಳ್ಳಿಯಲ್ಲಿ ವಿಶೇಷ ಮತದಾರ ಪರಿಷ್ಕರಣೆ ಕುರಿತು ಜನಜಾಗೃತಿ

ಕುಕ್ಕೆಹಳ್ಳಿಯಲ್ಲಿ ವಿಶೇಷ ಮತದಾರ ಪರಿಷ್ಕರಣೆ ಕುರಿತು ಜನಜಾಗೃತಿ


ವಿಶೇಷ ಮತದಾರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 3ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಅರಿವು ಮೂಡಿಸಿದರು.


ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಮತದಾರ ಪರಿಷ್ಕರಣೆ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ, ಮತದಾರರು ತಮ್ಮ ಹೆಸರುಗಳ ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಶಾಸಕರು ಮನವಿ ಮಾಡಿದರು. ಅಲ್ಲದೆ, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಜನಜಾಗೃತಿ ಕಾರ್ಯಕ್ರಮದಲ್ಲಿ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುರಂದರ್ ಕೋಟ್ಯಾನ್, ಮಾಜಿ ಸದಸ್ಯರಾದ ಶಂಕರ್ ಸಾಲ್ಯಾನ್ ಹಾಗೂ ಹರೀಶ್ ನಾಯ್ಕ, ಕಾರ್ಯಕರ್ತರಾದ ಶಿಲ್ಪಾ ಸಾಲ್ಯಾನ್ ಮತ್ತು ಅರವಿಂದ ಅಚಾರ್ಯ ಭಾಗವಹಿಸಿದರು.

Ads on article

Advertise in articles 1

advertising articles 2

Advertise under the article