ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಗೋಪಾಲ ಬಂಗೇರ ನೇಮಕ
Monday, July 20, 2026
ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಗೋಪಾಲ್ ಬಂಗೇರ ಅವರನ್ನು ನೇಮಕಗೊಳಿಸಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ,ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ,ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಂಕರ್ ಕುಂದರ್ ಮತ್ತು ನಿಯೋಜಿತ ಅಧ್ಯಕ್ಷ ತಿಮ್ಮ ಪೂಜಾರಿ ಅವರ ಶಿಫಾರಸಿನ ಮೇರೆಗೆ ಗೋಪಾಲ್ ಬಂಗೇರ ಅವರನ್ನು ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದ್ದಾರೆ.
ಗೋಪಾಲ್ ಬಂಗೇರ ಅವರು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಶ್ರೀಧರ್ ಪಿ ಎಸ್ ಇವರು ಗೋಪಾಲ ಬಂಗೇರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.