-->
 ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭದ್ರತಾ ಕ್ರಮಗಳ ಕುರಿತು ಸಿಬ್ಬಂದಿಗಳಿಗೆ ಮಾರ್ಗದರ್ಶನ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭದ್ರತಾ ಕ್ರಮಗಳ ಕುರಿತು ಸಿಬ್ಬಂದಿಗಳಿಗೆ ಮಾರ್ಗದರ್ಶನ


ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ಅಧೀನದಲ್ಲಿರುವ ‘ಎ’ ದರ್ಜೆ ಶ್ರೇಣಿಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ದೇವಸ್ಥಾನ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಗಳಿಗೆ ವಿಶೇಷ ಮಾರ್ಗದರ್ಶನ ನೀಡಲಾಯಿತು.


ಕುಂದಾಪುರ ಡಿವೈಎಸ್ಪಿ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಭದ್ರತೆ, ಹುಂಡಿಗಳ ಸುರಕ್ಷತೆ, ಗಣ್ಯ ವ್ಯಕ್ತಿಗಳ ಭದ್ರತಾ ವ್ಯವಸ್ಥೆ, ಭಕ್ತರ ಜನಸಂದಣಿ ನಿಯಂತ್ರಣ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಸಿಬ್ಬಂದಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ದೇವಸ್ಥಾನಕ್ಕೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆ, ಸುಗಮ ದರ್ಶನ ವ್ಯವಸ್ಥೆ, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಭದ್ರತಾ ಸಿಬ್ಬಂದಿಯ ಕರ್ತವ್ಯಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು. ದೇವಸ್ಥಾನದ ಪಾವಿತ್ರ್ಯತೆ ಹಾಗೂ ಭಕ್ತರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಎಲ್ಲ ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಸೂಚಿಸಿದರು.

Ads on article

Advertise in articles 1

advertising articles 2

Advertise under the article