-->
 ಉಡುಪಿಯಲ್ಲಿ ಕಾಂಗ್ರೆಸ್‌, ಕಾಕ್ರೋಚ್ ವಿರುದ್ಧ ಬಿಜೆಪಿ ಪ್ರತಿಭಟನೆ

ಉಡುಪಿಯಲ್ಲಿ ಕಾಂಗ್ರೆಸ್‌, ಕಾಕ್ರೋಚ್ ವಿರುದ್ಧ ಬಿಜೆಪಿ ಪ್ರತಿಭಟನೆ


ಕಾಕ್ರೋಚ್ ಪಾರ್ಟಿ ಹಾಗೂ ಅದರ ಬೆಂಬಲಿಗ ಕಾಂಗ್ರೆಸ್ ಪಾರ್ಟಿ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಜಟ್ಕಾ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸಿಜೆಪಿ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾರ್ಯಕರ್ತರು ಸಾಂಕೇತಿಕವಾಗಿ ಕಾಕ್ರೋಚ್‌ಗಳ ವಿರುದ್ಧ ಹಿಟ್ ಸಿಂಪಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.


ಬಿಜೆಪಿಯ ಐವರು ಶಾಸಕರಾದ ವಿ. ಸುನಿಲ್ ಕುಮಾರ್, ಯಶ್ ಪಾಲ್ ಸುವರ್ಣ, ಕಿರಣ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಗುರುರಾಜ ಗಂಟಿಹೊಳೆ ಭಾಗವಹಿಸಿ ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದರು.

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳು, ಪ್ರಕೋಷ್ಠಗಳು ಹಾಗೂ ಮಂಡಲಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


 

Ads on article

Advertise in articles 1

advertising articles 2

Advertise under the article