ಉಡುಪಿ: ನಿಯಂತ್ರಣ ತಪ್ಪಿ ಫುಟ್‌ಪಾತ್‌ಗೆ ಡಿಕ್ಕಿಯಾದ ಕಿಯಾ ಕಾರು
Monday, July 27, 2026
ನಿಯಂತ್ರಣ ಕಳೆದುಕೊಂಡ ಕಿಯಾ ಕಾರೊಂದು ಸೋಮವಾರ ಸಂಜೆ ಉಡುಪಿ ನಗರದ ಜಿಲ್ಲಾ ನ್ಯಾಯಾಲಯ (ಕೋರ್ಟ್) ಮುಂಭಾಗದ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಸೂಚನಾ ಫಲಕ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತಕ್ಕೆ ಕಾರಣಗಳ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ಅಲ್ಪ ಮಟ್ಟಿನ ವ್ಯತ್ಯಯ ಉಂಟಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿತು.
