ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಪ್ರಕರಣ: ಹಣ ವರ್ಗಾವಣೆಗೆ ಸಹಕರಿಸಿದ್ದ ಆರೋಪಿ ಬಂಧನ
Saturday, July 04, 2026
ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚಕರಿಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ವಂಚನೆಯ ಹಣದ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಜುಲೈ 3ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸರ ತನಿಖೆ ವೇಳೆ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 180/2022 ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಹಾಗೂ ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ ವಿಚಾರವೂ ತನಿಖೆಯಲ್ಲಿ ಬಹಿರಂಗವಾಗಿದೆ.