-->
 ರಾಜ್ಯ ವಕೀಲರ ಪರಿಷತ್ತಿಗೆ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಆಯ್ಕೆ

ರಾಜ್ಯ ವಕೀಲರ ಪರಿಷತ್ತಿಗೆ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಆಯ್ಕೆ


ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಬೆಂಗಳೂರು) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಅವರು ಜಯಗಳಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಇತಿಹಾಸದಲ್ಲೇ ಮಹಿಳೆಯೊಬ್ಬರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿರುವುದು ಇದೇ ಮೊದಲ ಬಾರಿಯಾಗಿದ್ದು, ಈ ಸಾಧನೆಗೆ ವಕೀಲ ಸಮುದಾಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

ಹಿರಿಯ ವಕೀಲೆಯಾಗಿರುವ ಶ್ಯಾಮಲಾ ಭಂಡಾರಿ ಅವರು ಸಾಮಾಜಿಕ ಹೋರಾಟಗಳ ಮೂಲಕ ಜನಪ್ರಿಯತೆ ಗಳಿಸಿದ್ದು, ಮಹಿಳಾ ಸಬಲೀಕರಣ, ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನು ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಾರ್ವಜನಿಕ ಜೀವನದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಪ್ರಸ್ತುತ ಅವರು ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ವಕೀಲರ ಹಿತಾಸಕ್ತಿ, ಕಾನೂನು ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದ್ದಾರೆ.


 

Ads on article

Advertise in articles 1

advertising articles 2

Advertise under the article