-->
ಎಸ್‌ಐಆರ್ ಸೂಪರ್‌ವೈಸರ್‌ಗೆ ಜಾತಿ ನಿಂದನೆ, ಬೆದರಿಕೆ: ಆರೋಪಿಗಳ ಬಂಧನ

ಎಸ್‌ಐಆರ್ ಸೂಪರ್‌ವೈಸರ್‌ಗೆ ಜಾತಿ ನಿಂದನೆ, ಬೆದರಿಕೆ: ಆರೋಪಿಗಳ ಬಂಧನ


ಎಸ್ಐಆರ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಗುಲ್ವಾಡಿ ಗ್ರಾಮದ ನಿವಾಸಿಗಳಾದ ಪಳ್ಳಿ ಸುಲೇಮಾನ್ ಹಾಗೂ ಶಫಿ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಪ್ರದೇಶದಲ್ಲಿ ಬಂಧಿಸಲಾಗಿದೆ.

ಎಸ್‌ಐಆರ್ ಸೂಪರ್‌ವೈಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುಲ್ವಾಡಿ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ನಾಯ್ಕ ಅವರಿಗೆ ಆರೋಪಿಗಳು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರೆಂದು ಆರೋಪಿಸಲಾಗಿದೆ.

ಪ್ರಕರಣದ ತನಿಖೆಯನ್ನು ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು. ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ನಿರಂಜನ್ ಗೌಡ, ಪೊಲೀಸ್ ಉಪನಿರೀಕ್ಷಕಿ ಚಂದ್ರಕಲಾ ಪತ್ತಾರ ಹಾಗೂ ಸಿಬ್ಬಂದಿಗಳಾದ ಸೂರ ನಾಯ್ಕ, ರಮೇಶ್ ನರೂಣಿ ಮತ್ತು ಮಂಜುನಾಥ ಪಡಸಲಗಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. 


 

Ads on article

Advertise in articles 1

advertising articles 2

Advertise under the article