ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಮಂಕಿ ಠಾಣಾ ಪಿಎಸ್‌ಐ ಅಭಿನಂದನ್ ಗೌಡ ಬಂಧನ
Monday, July 06, 2026
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಿಎಸ್‌ಐ ವಿರುದ್ಧ ಕ್ರಮ ಕೈಗೊಂಡು ಬಂಧಿಸಿದ್ದಾರೆ.
ಬಂಧಿತ ಅಭಿನಂದನ್ ಗೌಡ ಅವರು ರಾಮನಗರ ಜಿಲ್ಲೆಯ ಕನಕಪುರ ಮೂಲದವರಾಗಿದ್ದು, ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಪೊಲೀಸ್ ಠಾಣೆಗೆ ಎಲ್‌ಎನ್‌ಓ (Law & Order Officer) ಆಗಿ ವರ್ಗಾವಣೆಗೊಂಡಿದ್ದರು.
ಘಟನೆ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.