ಕೆಮ್ಮಣ್ಣು ಹಿಂದೂ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಟಿ.ರಾಮಪ್ಪ ಪೂಜಾರಿ ನಿಧನ
Monday, July 20, 2026
ಉಡುಪಿಯ ಕೆಮ್ಮಣ್ಣು ಹಿಂದೂ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ್ ಟಿ. ರಾಮಪ್ಪ ಪೂಜಾರಿ (ಮಾಸ್ಟರ್) ಜುಲೈ 19ರಂದು ರಾತ್ರಿ ನಿಧನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸೇವಾ ಮನೋಭಾವ, ಶಿಸ್ತು ಹಾಗೂ ಆದರ್ಶ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಅವರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಂತ್ಯಕ್ರಿಯೆಯು ಇಂದು (ಜುಲೈ20) ಹೂಡೆಯ ಬಿಲ್ಲವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.