-->
 ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ: ಪ್ರಕರಣ ದಾಖಲು

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ: ಪ್ರಕರಣ ದಾಖಲು


ಮಂಗಳೂರು ನಗರದ ಕೊಡಿಯಾಲಬೈಲ್‌ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಆ್ಯಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 7ರಂದು ರಾತ್ರಿ ಸುಮಾರು 10:35ರ ವೇಳೆಗೆ ಜಿಲ್ಲಾ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ಅವರು ಸಿಬ್ಬಂದಿಯೊಂದಿಗೆ ಜೈಲಿನ ಎ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದರು. ಈ ವೇಳೆ ವಿಚಾರಣಾಧೀನ ಕೈದಿಗಳಾದ ಅಜ್ಮಲ್ ಮತ್ತು ಇಕ್ಬಾಲ್ ಬಳಿ ಆ್ಯಂಡ್ರಾಯ್ಡ್ ಮೊಬೈಲ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.


ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಹೊಂದಿರುವುದು ಹಾಗೂ ಬಳಸಿರುವ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊಬೈಲ್‌ಗಳು ಜೈಲಿನೊಳಗೆ ಹೇಗೆ ಬಂದವು ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article