ಶಿಶು ಮಾರಾಟ ಪ್ರಕರಣ: ವೈದ್ಯ ಡಾ. ಕೆ. ಸುರೇಂದ್ರ ಕಾಮತ್‌ಗೆ ಜಾಮೀನು
Wednesday, July 08, 2026
ನಕಲಿ ಜನನ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ಮಕ್ಕಳಿಲ್ಲದ ದಂಪತಿಗಳಿಗೆ ಅಕ್ರಮವಾಗಿ ಶಿಶು ಮಾರಾಟ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಉಡುಪಿಯ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಅವರಿಗೆ ಜಾಮೀನು ಮಂಜೂರಾಗಿದೆ.
ಅನಾರೋಗ್ಯದ ಕಾರಣವನ್ನು ಉಲ್ಲೇಖಿಸಿ ಡಾ. ಕಾಮತ್ ಅವರು ಉಡುಪಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅವರ ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ನಿಗದಿತ ಷರತ್ತುಗಳೊಂದಿಗೆ ಡಾ. ಕೆ. ಸುರೇಂದ್ರ ಕಾಮತ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಡಾ. ಕಾಮತ್ ವಿರುದ್ಧ ನಕಲಿ ಜನನ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ಮಕ್ಕಳಿಲ್ಲದ ದಂಪತಿಗಳಿಗೆ ಅಕ್ರಮವಾಗಿ ಶಿಶುಗಳನ್ನು ಮಾರಾಟ ಮಾಡಿರುವ ಗಂಭೀರ ಆರೋಪದಡಿ ಪ್ರಕರಣ ದಾಖಲಾಗಿತ್ತು.