ಗಾನ ಕೋಗಿಲೆ ಎಸ್. ಜಾನಕಿ ವಿಧಿವಶ
Saturday, July 11, 2026
ಖ್ಯಾತ ಗಾಯಕಿ, ಗಾನ ಕೋಗಿಲೆ ಎಸ್.ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ತಿಳಿದುಂದಿದೆ.
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
ಬಳಿಕ ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಂಗೀತ ಲೋಕವನ್ನು 6 ದಶಕಗಳ ಕಾಲ ಆಳಿದ್ದಾರೆ.