-->
 ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ




ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು 6,000 ಸಿವಿಲ್ ಹಾಗೂ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಸರ್ಕಾರ ಅರ್ಜಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ನೀಡುವ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಜುಲೈ 5, (ಭಾನುವಾರ) ಬೆಳಿಗ್ಗೆ 9.00ರಿಂದ ಸಂಜೆ 5.00 ಗಂಟೆಯವರೆಗೆ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್, ಕೋಟ ಹಾಗೂ ಓಂ ಫ್ರೆಂಡ್ಸ್, ಕುಂದಾಪುರ ಸಹಯೋಗದಲ್ಲಿ ಈ ಉಚಿತ ತರಬೇತಿ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆಗೆ ಅಗತ್ಯವಾದ ಮಾರ್ಗದರ್ಶನ ಮತ್ತು ತರಬೇತಿ ನೀಡಲಿದ್ದಾರೆ.

ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಲಿದ್ದು, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಕಪ್ಪ ಲಮಾಣಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಪೊಲೀಸ್ ಇಲಾಖೆಗೆ ಸೇರುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಉಚಿತ ತರಬೇತಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಸದರ ಕಚೇರಿ ಪ್ರಕಟಣೆಯಲ್ಲಿ ಮನವಿ ಮಾಡಿದೆ. 

Ads on article

Advertise in articles 1

advertising articles 2

Advertise under the article