-->
ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್‌ಪಿ ಸೇರಿ ಮೂವರು ಅಮಾನತು

ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್‌ಪಿ ಸೇರಿ ಮೂವರು ಅಮಾನತು


ಹಣದ ಬೇಡಿಕೆ ಇಟ್ಟಿರುವ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ  ಕಾರ್ಕಳ ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಸೇರಿ ಮೂವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ವೈರಲ್ ಆಗಿರುವ ವಿಡಿಯೋಗಳು ಹಾಗೂ ಸಾರ್ವಜನಿಕವಾಗಿ ಕೇಳಿಬಂದಿರುವ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ತನಿಖಾ ವರದಿಯಲ್ಲಿ ಕಂಡುಬಂದ ಅಂಶಗಳ ಆಧಾರದ ಮೇಲೆ ಕಾರ್ಕಳ ಉಪ ವಿಭಾಗದ ಡಿವೈಎಸ್‌ಪಿ ವಿಜಯ ಪ್ರಸಾದ್, ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದ್ದು, ತನಿಖೆಯ ಅಂತಿಮ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article