-->
ಕುರ್ಕಾಲು ಜನಸಂಪರ್ಕ ಸಭೆ: ಗ್ರಾಮಸ್ಥರ ಅಹವಾಲು ಸ್ವೀಕಾರ, ವಿವಿಧ ಸವಲತ್ತು ವಿತರಣೆ

ಕುರ್ಕಾಲು ಜನಸಂಪರ್ಕ ಸಭೆ: ಗ್ರಾಮಸ್ಥರ ಅಹವಾಲು ಸ್ವೀಕಾರ, ವಿವಿಧ ಸವಲತ್ತು ವಿತರಣೆ


ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು.


ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.


ಗ್ರಾಮ ಪಂಚಾಯತ್‌ನ 25 ಶೇಕಡಾ ಅನುದಾನದಡಿ ಇಬ್ಬರು ಫಲಾನುಭವಿಗಳಿಗೆ ಕುಲ ಕಸುಬು ಹಾಗೂ ಮದುವೆ ಧನ ಸಹಾಯ ವಿತರಿಸಲಾಯಿತು. ಅಲ್ಲದೆ, 5 ಶೇಕಡಾ ಅನುದಾನದಡಿ ಒಂಬತ್ತು ವಿಕಲಚೇತನ ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನದ ಚೆಕ್‌ಗಳನ್ನು ವಿತರಿಸಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 40 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ತಹಶೀಲ್ದಾರ್  ಅನಂತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿ ಗುರುಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರೊಂದಿಗೆ ನೇರ ಸಂವಾದ ನಡೆಸಿದ ಶಾಸಕರು, ಸ್ಥಳೀಯ ಸಮಸ್ಯೆಗಳಿಗೆ ಆದ್ಯತೆ ನೀಡಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

Ads on article

Advertise in articles 1

advertising articles 2

Advertise under the article