ಮನೆ ಬಿಟ್ಟು ಹೋದ ವ್ಯಕ್ತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ
Thursday, July 09, 2026
ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಅವರು ಮನೆ ಬಿಟ್ಟು ತೆರಳಿದ ಬಳಿಕ ನಾಪತ್ತೆಯಾಗಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 28ರಂದು ಸಂಜೆ ಸುಮಾರು 7.30ರ ವೇಳೆಗೆ ತಮ್ಮ ಮಗನೊಂದಿಗೆ ವಾಗ್ವಾದ ನಡೆಸಿದ ಕುಶಾಲ್ ಶೆಟ್ಟಿ ಅವರು, ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ತಮ್ಮ ಓಮ್ನಿ ಕಾರಿನಲ್ಲಿ ಬಟ್ಟೆಬರೆಗಳೊಂದಿಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರು ಇದುವರೆಗೆ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.
ನಾಪತ್ತೆಯಾಗಿರುವ ಕುಶಾಲ್ ಶೆಟ್ಟಿ ಅವರು ಸುಮಾರು 5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹಾಗೂ ಕೋಲುಮುಖ ಹೊಂದಿದ್ದಾರೆ. ಅವರು ಕನ್ನಡ, ತುಳು, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳನ್ನು ಮಾತನಾಡಬಲ್ಲರು. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.: 08253-251116), ಪೊಲೀಸ್ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 9480805463 ಅಥವಾ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ (ದೂ.: 08258-231108, ಮೊ.: 9480805435 ಗೆ ಮಾಹಿತಿ ನೀಡುವಂತೆ ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.