-->
 ಹಿರಿಯ ಉದ್ಯಮಿ ಸಖೇಂದ್ರ ಬಿ. ಸುವರ್ಣ ನಿಧನ

ಹಿರಿಯ ಉದ್ಯಮಿ ಸಖೇಂದ್ರ ಬಿ. ಸುವರ್ಣ ನಿಧನ


ಕಾಪುವಿನ ಹಿರಿಯ ಉದ್ಯಮಿ ಹಾಗೂ ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದರು.

ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ ಅವರು, ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರು, ಕಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರಾದ ಗಂಗಾಧರ ಸುವರ್ಣ, ಕಮಲಾಕ್ಷ ಸುವರ್ಣ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article