ಅಪ್ರಾಪ್ತ ಬಾಲಕಿಯ ಅತ್ಯಾಚಾರ : ಆರೋಪಿಯ ಬಂಧನ
Tuesday, July 21, 2026
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ ನಿವಾಸಿ ಶುಭರಾಜ್ (28)ಬಂಧಿತ ಆರೋಪಿ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.