ಪುಟ್ಟ ಮಗುವಿನೊಂದಿಗೆ ಭಿಕ್ಷಾಟನೆ: ಉಡುಪಿ ಪೊಲೀಸರ ನೆರವಿನಿಂದ ಆಶ್ರಯ ಗೃಹಕ್ಕೆ ಸ್ಥಳಾಂತರ
Monday, July 13, 2026
ಉಡುಪಿ ನಗರದ ಕಲ್ಸಂಕ ಪ್ರದೇಶದಲ್ಲಿ ಮಧ್ಯರಾತ್ರಿ ವೇಳೆ ಪುಟ್ಟ ಮಗುವಿನೊಂದಿಗೆ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಅವರ ಕುಟುಂಬಿಕರನ್ನು ಉಡುಪಿ ನಗರ ಪೊಲೀಸರು ಪತ್ತೆಹಚ್ಚಿ, ಮಂಗಳೂರಿನ ವಾಮಂಜೂರಿನ ಸರ್ಕಾರಿ ಆಶ್ರಯ ಗೃಹಕ್ಕೆ ಸ್ಥಳಾಂತರಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರು ಭಾನುವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಕಲ್ಸಂಕ ಪ್ರದೇಶದಲ್ಲಿ ಪುಟ್ಟ ಮಗುವನ್ನು ಕರೆದುಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬವನ್ನು ಗಮನಿಸಿದ್ದಾರೆ. ಮಗುವಿನ ಸುರಕ್ಷತೆ ಬಗ್ಗೆ ಆತಂಕಗೊಂಡ ಅವರು ತಕ್ಷಣ ಉಡುಪಿ ನಗರ ಪೊಲೀಸರ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಮಾಹಿತಿ ಪಡೆದ ಉಡುಪಿ ನಗರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕುಟುಂಬದ ಸದಸ್ಯರನ್ನು ಪತ್ತೆಹಚ್ಚಿ ಅವರ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಗುವಿನ ಸುರಕ್ಷತೆ ಹಾಗೂ ಕುಟುಂಬದ ಹಿತದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಅಗತ್ಯ ಕ್ರಮಗಳನ್ನು ಕೈಗೊಂಡ ಪೊಲೀಸರು, ಕುಟುಂಬವನ್ನು ಮಂಗಳೂರಿನ ವಾಮಂಜೂರಿನ ಸರ್ಕಾರಿ ಆಶ್ರಯ ಗೃಹಕ್ಕೆ ಸ್ಥಳಾಂತರಿಸಿದರು. ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಕಾಳಜಿಯ ಹಿನ್ನೆಲೆಯಲ್ಲಿ ಸೂಕ್ತ ಸಮಯದಲ್ಲಿ ಮಾಹಿತಿ ನೀಡಿದ ಹರಿಪ್ರಸಾದ್ ರೈ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
.jpeg)
.jpeg)