-->
 ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ


ಉಡುಪಿಯ ಮಧ್ಯನಗರದ ನಿವಾಸಿ,  ರಿಕ್ಷಾ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಆದಿಉಡುಪಿ ರಿಕ್ಷಾ ನಿಲ್ದಾಣದ ಸದಸ್ಯ ಸುರೇಂದ್ರ ಮಧ್ಯನಗರ (42) ಎಂದು ಗುರುತಿಸಲಾಗಿದೆ. ಸುರೇಂದ್ರ ಅವರು ಸುಮಾರು ಒಂದು ವಾರದ ಹಿಂದಷ್ಟೇ ಹೊಸ ರಿಕ್ಷಾವೊಂದನ್ನು ಖರೀದಿಸಿದ್ದರು ಎನ್ನಲಾಗಿದೆ. ಬುಧವಾರ ತಡರಾತ್ರಿ ಕುಟುಂಬದವರು ಮಲಗಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Ads on article

Advertise in articles 1

advertising articles 2

Advertise under the article