ಎಸ್‌ಎಸ್‌ಪಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
Saturday, July 04, 2026
ಉಡುಪಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಎಸ್‌ಎಸ್‌ಪಿ (SSP) ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲ್ಲೂಕುಗಳ ಎಲ್ಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ)ದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್‌ಪಿಸಿಐ (NPCI) ಮ್ಯಾಪಿಂಗ್ ಮಾಡಿಸಿರುವುದು ಕಡ್ಡಾಯವಾಗಿದೆ. ಜೊತೆಗೆ, ಪರಿಶಿಷ್ಟ ಪಂಗಡ (ಎಸ್‌ಟಿ)ದ ಎಲ್ಲ ವಿದ್ಯಾರ್ಥಿಗಳು ಎನ್‌ಎಸ್‌ಪಿ (NSP) ಒಟಿಆರ್ (OTR) ನೋಂದಣಿ ಮಾಡಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದಿದ್ದಲ್ಲಿ ಎಸ್‌ಎಸ್‌ಪಿ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆ ಸಂಪೂರ್ಣಗೊಂಡಂತೆ ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 9480843209.