ಶಿರ್ವ: ಜನಸಂಪರ್ಕ ಸಭೆ: ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ವಿವಿಧ ಸವಲತ್ತುಗಳ ವಿತರಣೆ
Thursday, July 09, 2026
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಶಿರ್ವ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮಸ್ಥರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ, ಅವುಗಳ ತ್ವರಿತ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಾಲ್ವರು ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ–ಸುಕನ್ಯ ಸಮೃದ್ಧಿ ಬಾಂಡ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಪು ಉಪ ತಹಶೀಲ್ದಾರ್ ರವಿ ಕಿರಣ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿ ಗಿರೀಶ್ ಹೊಳ್ಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.