-->
 ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಗೆ ಜೀವ ಬೆದರಿಕೆ; ರೌಡಿ ಶೀಟರ್ ಬಂಧನ

ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಗೆ ಜೀವ ಬೆದರಿಕೆ; ರೌಡಿ ಶೀಟರ್ ಬಂಧನ


ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ರೌಡಿ ಶೀಟರ್ ನಿಖಿಲ್‌ನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಜುಲೈ 13ರಂದು ಬೆಳಿಗ್ಗೆ ಹಂದಾಡಿ–ಮಟಪಾಡಿ ಗ್ರಾಮದಲ್ಲಿ ಗಸ್ತು ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಬ್ರಹ್ಮಾವರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಿಶನ್ ಅವರು, ಪೊಲೀಸ್ ಉಪನಿರೀಕ್ಷಕರ ಸೂಚನೆಯಂತೆ ಸಂಜೆ 7 ಗಂಟೆ ಸುಮಾರಿಗೆ ರೌಡಿ ಶೀಟರ್ ನಿಖಿಲ್‌ನನ್ನು ಪರಿಶೀಲಿಸಲು ಆತನ ಮನೆಗೆ ತೆರಳಿದ್ದರು. ಮನೆಯಲ್ಲಿ ಆರೋಪಿ ಇಲ್ಲದ ಕಾರಣ, ಕಾನ್ಸ್‌ಟೇಬಲ್ ಅವರು ಮೊಬೈಲ್ ಮೂಲಕ ಸಂಪರ್ಕಿಸಿ ಆತನಿರುವ ಸ್ಥಳವನ್ನು ವಿಚಾರಿಸಿದ್ದಾರೆ.

ಈ ವೇಳೆ ನಿಖಿಲ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಿಖಿಲ್ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಒಂದು ಸುಲಿಗೆ ಪ್ರಕರಣ ಹಾಗೂ ಒಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಆತ ರೌಡಿ ಶೀಟರ್ ಆಗಿದ್ದಾನೆ.

Ads on article

Advertise in articles 1

advertising articles 2

Advertise under the article