ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ‘ಬೇಡ ಬ್ರೋ– SAY NO TO DRUGS’ ಜಾಗೃತಿ ಕಾರ್ಯಕ್ರಮ
Tuesday, July 21, 2026
ಯುವಜನತೆಯಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮಣಿಪಾಲ ಠಾಣೆಯ ವತಿಯಿಂದ ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ಯಕ್ಷಗಾನ ಕಲಿಕಾ ಮಕ್ಕಳಿಗಾಗಿ ‘ಬೇಡ ಬ್ರೋ – SAY NO TO DRUGS’ ಎಂಬ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಯುವಜನತೆ, ವಿಶೇಷವಾಗಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ಸಂದೇಶವನ್ನು ಹರಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯಕ್ಷಗಾನದಂತಹ ಸಾಂಸ್ಕೃತಿಕ ಕಲಾ ಮಾಧ್ಯಮದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ವವನ್ನು ಮಕ್ಕಳಿಗೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಣಿಪಾಲ ಠಾಣೆಯ ಎಎಸ್‌ಐ ರಾಮಪ್ರಭು ಅವರು, “ಮಾದಕ ದ್ರವ್ಯಗಳ ವಿರುದ್ಧ ಹೋರಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ. ಯುವಜನತೆ ಜಾಗೃತರಾದರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಯಕ್ಷಗಾನವು ಮಹತ್ವದ ಪಾತ್ರ ವಹಿಸುತ್ತಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಎಸ್‌ಐ ಗಣೇಶ್ ದೇವಾಡಿಗ, ಹೆಡ್ ಕಾನ್ಸ್‌ಟೇಬಲ್ ಚೇತನ್, ಉಮೇಶ್ ಸುವರ್ಣ, ಕೃಷ್ಣಮೂರ್ತಿ ಭಟ್, ಬಸವ ಮುಂಡಾಡಿ, ನಾಗರಾಜ್ ಹಾಗೂ ಶಂಕರ್ ನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
.jpeg)