SIR: ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಮುಂದೂಡಿದ ಚುನಾವಣಾ ಆಯೋಗ
Wednesday, July 15, 2026
ಭಾರತೀಯ ಚುನಾವಣಾ ಆಯೋಗವು ಕರ್ನಾಟಕ ಸಹಿತ ಹಲವು ರಾಜ್ಯಗಳಲ್ಲಿ ಎಸ್‌ಐಆರ್ (SIR) ಅಡಿಯಲ್ಲಿ ಮನೆ-ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸುವ ಮತ್ತು ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಸಿದೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ತೆರಳಿ ಪರಿಶೀಲನೆ ಆಗಸ್ಟ್ 8ರವರೆಗೆ ಮುಂದುವರಿಯಲಿದ್ದು, ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರ ಬದಲು ಆಗಸ್ಟ್ 17ರಂದು ಪ್ರಕಟಿಸಲಾಗುವುದು.
ಇದರಿಂದಾಗಿ ಚುನಾವಣಾ ಅಧಿಕಾರಿಗಳಿಗೆ ಜುಲೈ 29ರ ಹಿಂದಿನ ಗಡುವು ಮೀರಿ 10 ದಿನಗಳು ಹೆಚ್ಚುವರಿಯಾಗಿ ದೊರೆಯಲಿವೆ.