-->
 ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ: ಅಪಾರ ನಷ್ಟ

ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ: ಅಪಾರ ನಷ್ಟ


ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇರುವ ಶೂ ಅಂಗಡಿಯೊಂದಕ್ಕೆ ಮಂಗಳವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, 'ಯುರೋಪ್' ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.  

Ads on article

Advertise in articles 1

advertising articles 2

Advertise under the article