-->
ವಿಕೆ ಬಿಲ್ಡರ್ಸ್ ಎಂಡ್ ಡೆವಲಪರ್ಸ್ ವತಿಯಿಂದ ಉಡುಪಿ ನಗರ ಠಾಣೆಗೆ 15 ಬ್ಯಾರಿಕೇಡ್‌ಗಳ ಕೊಡುಗೆ

ವಿಕೆ ಬಿಲ್ಡರ್ಸ್ ಎಂಡ್ ಡೆವಲಪರ್ಸ್ ವತಿಯಿಂದ ಉಡುಪಿ ನಗರ ಠಾಣೆಗೆ 15 ಬ್ಯಾರಿಕೇಡ್‌ಗಳ ಕೊಡುಗೆ


ಉಡುಪಿ ನಗರದ ಸಂಚಾರ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಅನುಕೂಲವಾಗುವಂತೆ ವಿಕೆ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್‌ನ ಕೆ.ಎಂ. ಶೆಟ್ಟಿ ಅವರು ಉಡುಪಿ ನಗರ ಠಾಣೆಗೆ 15 ಬ್ಯಾರಿಕೇಡ್‌ಗಳನ್ನು ಕೊಡುಗೆಯಾಗಿ ನೀಡಿದರು.


ಉಡುಪಿ ನಗರ ಠಾಣೆಯ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾರಿಕೇಡ್‌ಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ನಗರದ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ನಿಯಂತ್ರಣ ಹಾಗೂ ಅಗತ್ಯ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕಾರ್ಯಕ್ಕೆ ಬ್ಯಾರಿಕೇಡ್‌ಗಳು ಸಹಕಾರಿಯಾಗಲಿವೆ.


ಈ ಸಂದರ್ಭದಲ್ಲಿ ಉಡುಪಿ ನಗರ ಠಾಣೆಯ ಪ್ರಭಾರ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article