ನಾಗರಪಂಚಮಿ ಪ್ರಯುಕ್ತ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ
Sunday, August 16, 2026
ನಾಗರಪಂಚಮಿ ಹಬ್ಬದ ಪ್ರಯುಕ್ತ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17ರಂದು (ಸೋಮವಾರ) ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಡಿಸಲಾಗಿರುವ ಪ್ರಕಟಣೆಯಂತೆ, ಸೋಮವಾರ ಎರಡೂ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಅನ್ವಯವಾಗಲಿದೆ.