-->
 ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವ ಆಚರಣೆ

ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವ ಆಚರಣೆ


ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವವನ್ನು ಶುಕ್ರವಾರ  ಬನ್ನಂಜೆಯ ನಾರಾಯಣ ಆಡಿಟೋರಿಯಂನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಮಾಜದಲ್ಲಿ ಸಮಾನತೆ, ಸಹೋದರತೆ, ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಯ ಮಹತ್ವವನ್ನು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಇಂದಿನ ಯುವಪೀಳಿಗೆ ಅಳವಡಿಸಿಕೊಳ್ಳಬೇಕು. ಜಾತಿ, ಮತ, ಧರ್ಮದ ಭೇದಭಾವವಿಲ್ಲದೆ ಎಲ್ಲರೂ ಸಮಾನರು ಎಂಬ ನಾರಾಯಣಗುರುಗಳ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಚಿಂತನೆಗಳು ಸಮಾಜದ ಪ್ರಗತಿಗೆ ದಾರಿದೀಪವಾಗಿವೆ ಎಂದು ಅತಿಥಿಗಳು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article