-->
ಉಡುಪಿ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ, 11,500 ರೂ. ದಂಡ ವಸೂಲಿ

ಉಡುಪಿ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ, 11,500 ರೂ. ದಂಡ ವಸೂಲಿ


ಉಡುಪಿ ಆರ್‌ಟಿಓ ಇಲಾಖೆ ಹಾಗೂ ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ರಸ್ತೆ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸದ ಒಟ್ಟು 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉಡುಪಿ ನಗರದಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ತಪಾಸಣೆಯಲ್ಲಿ 15 ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇದೇ ವೇಳೆ ಜುಲೈ 27ರಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 8 ಪ್ರಕರಣಗಳು ದಾಖಲಾಗಿವೆ.

ಒಟ್ಟು 11,500 ರೂ ದಂಡವನ್ನು ವಸೂಲಿ ಮಾಡಲಾಗಿದೆ. ರಸ್ತೆ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇಂತಹ ವಿಶೇಷ ತಪಾಸಣಾ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article