ಉಡುಪಿ: ಶ್ರೀ ಗುರು ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ
Sunday, August 30, 2026
ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಥಬೀದಿಯಲ್ಲಿರುವ ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ರಾಘವೇಂದ್ರ ಗುರುಸಾರ್ವಭೌಮರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಲ್ಲ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಠದ ವತಿಯಿಂದ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

